ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಧರ್ಮಸ್ಥಳ ಪೊಲೀಸ್ ಠಾಣೆಯ CC No. 2937/2019 ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಯಶೋಧರ ಎಂಬಾತನನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಕಡಿರುದ್ಯಾವರ ಎಂಬಲ್ಲಿಂದ ಯಶೋಧರನನ್ನು ದಸ್ತಗಿರಿ ಮಾಡಿದ್ದಾರೆ.
ನಂತರ ಆರೋಪಿಯನ್ನು ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಧರ್ಮಸ್ಥಳ ಪೊಲೀಸರು ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.




