ಸುಳ್ಯ: ಪಿಕಪ್ ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ವಾಹನವೊಂದು ಉರಿದು ಸುಟ್ಟು ಹೋದ ಘಟನೆ ಮೇ 11ರಂದು ಬೆಳಗ್ಗೆ ಸುಳ್ಯದ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವಿನಲ್ಲಿ ಆಕಸ್ಮಿಕವಾಗಿ ಎದುರು ಭಾಗದಲ್ಲಿ ಬೆಂಕಿ ಹತ್ತಿಕೊಂಡು ಉರಿಯಿತು. ಚಾಲಕ ಕೂಡಲೇ ವಾಹನ ನಿಲ್ಲಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದರು. ಆದರೂ ಬೆಂಕಿಯ ತೀವ್ರತೆಗೆ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಸ್ಥಳೀಯರು ಆಗಮಿಸಿ ಕಾರ್ಯಾಚರಣೆ ನಡೆಸಿದರು.