ಉಡುಪಿ: ಕೂಲಿ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ನ.23ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ನಾಪತ್ತೆಯಾದ ಯುವಕ ಉದ್ಯಾವರ ಗ್ರಾಮದ ನಿವಾಸಿ ಲಕ್ಷ್ಮಣ ಛಲವಾದಿ (23) ಎಂದು ತಿಳಿದು ಬಂದಿದೆ.
ಇವರು 5 ಅಡಿ 1 ಇಂಚು ಎತ್ತರ, ಕಪ್ಪು ಮೈಬಣ್ಣ ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ ಎಂದು ತಿಳಿದು ಬಂದಿದೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ಅಥವಾ ಕಾಪು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.



