Home Crime ಕಾಪು: ಸೇತುವೆಗೆ ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು…!!

ಕಾಪು: ಸೇತುವೆಗೆ ಬೈಕ್ ಢಿಕ್ಕಿ : ಸವಾರ ಸ್ಥಳದಲ್ಲೇ ಮೃತ್ಯು…!!

ಕಾಪು: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ನಡೆದಿದೆ.

ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಯುವರಾಜ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಚ್ಚಿಲದ ಎಸ್‌ಡಿಪಿಐ ಆಂಬುಲೆನ್ಸ್ ನಲ್ಲಿ ಕೆಎಂ ಸಿರಾಜ್, ಜಲಾಲುದ್ದೀನ್ ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.