Home Crime ದರ್ಶನ್‌ ಪತ್ನಿಯ ವಿರುದ್ದ ಅವಹೇಳನಕಾರಿ ಪೋಸ್ಟ್‌ : ಇಬ್ಬರು ಅರೆಸ್ಟ್…!!

ದರ್ಶನ್‌ ಪತ್ನಿಯ ವಿರುದ್ದ ಅವಹೇಳನಕಾರಿ ಪೋಸ್ಟ್‌ : ಇಬ್ಬರು ಅರೆಸ್ಟ್…!!

ಬೆಂಗಳೂರು : ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಬಂಧಿತರ ಪೈಕಿ ಒಬ್ಬರು ಬೆಂಗಳೂರಿನವರಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಪ್ರಕರಣದ ಕುರಿತು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಒಂದು ಹೇಳಿಕೆ ನೀಡಿದ್ದರು. ಆ ಹೇಳಿಕೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಅಶ್ಲೀಲ ಹಾಗೂ ಅವಾಚ್ಯ ಕಾಮೆಂಟ್‌ಗಳು ಹೆಚ್ಚಾಗಿ ಹರಡಿದ್ದವು. ಇದರಿಂದ ಕೋಪಗೊಂಡ ವಿಜಯಲಕ್ಷ್ಮಿ ಅವರು, 15 ಇನ್‌ಸ್ಟಾಗ್ರಾಂ ಖಾತೆಗಳು ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್‌ಗಳ ವಿರುದ್ಧ ಫೋಟೋ ಸಾಕ್ಷ್ಯಗಳೊಂದಿಗೆ ದೂರು ದಾಖಲಿಸಿದ್ದರು.

ಈ ದೂರು ಆಧರಿಸಿ ತನಿಖೆ ನಡೆಸಿದ ಸೈಬರ್ ಪೊಲೀಸರು, ಆ 15 ಐಡಿಗಳಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರ ಪತ್ತೆಗಾಗಿ ತನಿಖೆ ಮುಂದುವರಿದಿದೆ.