ಉಡುಪಿ : ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಅಂಬಲಪಾಡಿ ಸಮೀಪದ BR Meadows ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಸಚಿನ್ ಶೆಟ್ಟಿ ಗುರುತಿಸಲಾಗಿದೆ.
ಇವರು ಅಂಬಲಪಾಡಿಯಲ್ಲಿ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಚಿನ್ ಶೆಟ್ಟಿ ಸ್ನೇಹ ಜೀವಿಯಾಗಿದ್ದರು. ಇವರು ಸಮಾಜ ಸೇವೆಯ ಕೆಲಸಗಳನ್ನು ಮಾಡುತ್ತಿದ್ದರು. ಇವರ ಸಾವಿನ ಬಗ್ಗೆ ಸ್ನೇಹಿತರು ದುಃಖ ವ್ಯಕ್ತಪಡಿಸಿದ್ದಾರೆ.





