ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಳದಲ್ಲಿ ನಡೆದಿದೆ.
ನವೀನ (42) ನೇಣಿಗೆ ಶರಣಾದವರು. ಇವರು ಮದ್ಯಪಾನ ಮಾಡಿ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದರು.
ಇದೇ ವಿಚಾರವಾಗಿ ಹೆಂಡತಿ ಜಾನಕಿ ಅವರು 2 ತಿಂಗಳ ಹಿಂದೆ ಮನೆ ಬಿಟ್ಟು ತವರು ಮನೆಯಾದ ಸುಳ್ಯಕ್ಕೆ ಹೋಗಿದ್ದಾರೆ. ನವೀನ್ ಅವರು ಆ. 9 ತಮ್ಮ ಮನೆಯ ಬಳಿಯಿರುವ ಹಾಡಿಯಲ್ಲಿ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಪರೀತ ಮದ್ಯಪಾನ ಮಾಡುವ ಚಟದಿಂದ ಅಥವಾ ಇನ್ಯಾವುದೋ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಅಣ್ಣ ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.




