Home Crime ಬಂಟ್ವಾಳ : ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ₹71.41 ಲಕ್ಷ ವಂಚನೆ : ಜಂಟಿ ವ್ಯವಸ್ಥಾಪಕನ...

ಬಂಟ್ವಾಳ : ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ₹71.41 ಲಕ್ಷ ವಂಚನೆ : ಜಂಟಿ ವ್ಯವಸ್ಥಾಪಕನ ವಿರುದ್ಧ ಪ್ರಕರಣ ದಾಖಲು…!!

ಬಂಟ್ವಾಳ: ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಭಾರೀ ಹಣ ಮತ್ತು ಚಿನ್ನದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

ಶಾಖೆಯ ಜಂಟಿ ವ್ಯವಸ್ಥಾಪಕರಾಗಿದ್ದ ಸುಬ್ರಹ್ಮಣ್ಯಂ (30), ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿದ್ದ ವ್ಯಕ್ತಿಯೇ ವಂಚನೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ದಿನಾಂಕ 06-02-2024 ರಿಂದ 16-12-2025 ರವರೆಗೆ ಎಟಿಎಂಗೆ ನಿಗದಿತ ಪ್ರಮಾಣದ ನಗದು ಜಮಾ ಮಾಡದೇ ಕಡಿಮೆ ಹಣ ಜಮಾ ಮಾಡಿ ಒಟ್ಟು ₹70,86,000 ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದಲ್ಲದೆ, 19-12-2025 ರಂದು ಸೇಫ್ ಲಾಕರ್ ಪರಿಶೀಲನೆ ವೇಳೆ 4.400 ಗ್ರಾಂ ಚಿನ್ನ ವಂಚನೆಯಾದುದು ಪತ್ತೆಯಾಗಿದೆ.ಹಣದ ದುರುಪಯೋಗ ಬೆಳಕಿಗೆ ಬರುತ್ತಿದ್ದಂತೆ ಆರೋಪಿತನು 17-12-2025 ರಂದು ಯಾರಿಗೂ ಮಾಹಿತಿ ನೀಡದೇ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಒಟ್ಟು ವಂಚನೆಯ ಮೌಲ್ಯ ₹71,41,000 ಆಗಿದೆ.

ಈ ಕುರಿತು ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರಾದ ಸಿ.ವಿ.ಎಸ್. ಚಂದ್ರಶೇಖರ್ (50) ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.