Home Uncategorized ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಲಾರಿ…!!

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಲಾರಿ…!!

ಪುತ್ತೂರು : ಮೆಲ್ಕಾರ್‌ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಚಲಿಸಿ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಘಟನೆ ಬಳಿಕ ಲಾರಿಯಲ್ಲಿದ್ದ ಸಿಮೆಂಟ್ ಇಟ್ಟಿಗೆಗಳನ್ನು ಮತ್ತೊಂದು ಲಾರಿಗೆ ಸ್ಥಳಾಂತರಿಸಿ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಯಿತು. ಬಳಿಕ ಕ್ರೇನ್‌ನ್ನು ಸ್ಥಳಕ್ಕೆ ತರಿಸಿ ಚರಂಡಿಗೆ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತಲಾಯಿತು. ಅಪಘಾತದ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.