ಮಂಗಳೂರು: ನೀಟ್ ಪರೀಕ್ಷೆ ಬರೆಯಲು ಮಂಗಳೂರಿಗೆ ಬಂದಿದ್ದ ವಿದ್ಯಾರ್ಥಿಯ ಸಹೋದರನು ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಕೇರಳದ ಬೇಕಲ್ ನಿವಾಸಿ ಅರ್ಜುನ್ ಮಹೇಶ್ ಎಂದು ತಿಳಿಯಲಾಗಿದೆ.
ಘಟನೆಯ ವಿವರ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಪರೀಕ್ಷೆಯ ಒತ್ತಡ, ವೈಯಕ್ತಿಕ ಸಮಸ್ಯೆ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ.
ಲಾಡ್ಜ್‌ನಲ್ಲಿ ನೀಟ್ ಪರೀಕ್ಷಾರ್ಥಿಯ ಸಹೋದರ ನೇಣು ಬಿಗಿದು ಆತ್ಮಹತ್ಯೆಗೆ ಕಾರಣ ತನಿಖೆ ನಡೆಯುತ್ತಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.




