Home Crime ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಉಲ್ಲೇಖ…!!

ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಉಲ್ಲೇಖ…!!

ಉಡುಪಿ: ಉಡುಪಿ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸಚಿನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟವಾಗಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ಸೊಸೈಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್, ಸೋಮವಾರ ಆತ್ಮಹತ್ಯೆಗೂ ಮುನ್ನ ಏಳು ಪುಟಗಳ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾರಿ ಮೊತ್ತದ ಹಣ ಕಳೆದುಕೊಂಡಿದ್ದ ಅವರು, ಸ್ನೇಹಿತರಿಂದ ಸಾಲ ಪಡೆದಿದ್ದರು. ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದರ ಜತೆಗೆ, ತಾವು ಕಾರ್ಯನಿರ್ವಹಿಸುತ್ತಿದ್ದ ಸೊಸೈಟಿಯ ನಾಲ್ವರು ನಿರ್ದೇಶಕರು ರಾಜೀನಾಮೆ ನೀಡಿದ್ದರಿಂದ ಗ್ರಾಹಕರು ಠೇವಣಿ ಹಣವನ್ನು ಹಿಂಪಡೆಯಲು ಸೊಸೈಟಿಗೆ ಬರುತ್ತಿದ್ದರು. ಈ ಬೆಳವಣಿಗೆಯಿಂದಲೂ ಸಚಿನ್ ಮಾನಸಿಕವಾಗಿ ನೊಂದಿದ್ದರು ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಸೋತು ಆತ್ಮಹತ್ಯೆ ಮಾಡಿಕೊಳ್ಳವರ ಸಂಖ್ಯೆ ಹೆಚ್ಚಾಗಿದೆ.ಇದಕ್ಕೆ ಕಾರಣ ಬುಕ್ಕಿಗಳು ಕೊಡುವ ಟಾರ್ಚರ್. ಉಡುಪಿ ಜಿಲ್ಲೆಯ ಹಾಗೂ ಮಂಗಳೂರು ನಗರದಲ್ಲಿ ಕೆಲವು ಮಂದಿ ದೊಡ್ಡ ದೊಡ್ಡ ಬುಕ್ಕಿಗಳು ಇದ್ದಾರೆ. ಇವರ ಬೆದರಿಕೆಗಳು ಹೆಚ್ಚಾಗಿದೆ. ಇಂತಹ ಬುಕ್ಕಿಗಳ‌್ನು ಬಂಧಿಸಬೇಕೆಂದು ಪೊಲೀಸ್ ಇಲಾಖೆಗೆ ಸಾರ್ವಜನಿಕರು‌ ಒತ್ತಾಯಿಸಿದ್ದಾರೆ.

ಈ ಘಟನೆ‌ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.