ಬೈಂದೂರು: ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೈಂದೂರು ಗ್ರಾಮದ ಬಾಡ ಎಂಬಲ್ಲಿ ನಡೆದಿದೆ.
ಆಗಸ್ಟ್ 11ರಂದು ಸಂಜೆ ಸುಮಾರು 6:50ರ ವೇಳೆಗೆ ಮಡಗಾಂವ್‌ನಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ರೈಲು, ಕೊಂಕಣ ರೈಲ್ವೆ ಟ್ರ್ಯಾಕ್‌ನ 627/3-4ನೇ ಕಿ.ಮೀ. ವ್ಯಾಪ್ತಿಯಲ್ಲಿ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.
ರೈಲು ಅಪಘಾತದ ಕುರಿತು ಬಿಜೂರು ಸ್ಟೇಷನ್ ಮಾಸ್ಟರ್ ಅವರು ರೈಲ್ವೆ ಇಲಾಖೆಯ ಸಿಬ್ಬಂದಿ ನಾಗರಾಜ ನಾಯ್ಕ ಅವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಸುಮಾರು 30ರಿಂದ 40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಘಟನೆಯ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆ ಹಾಗೂ ಮುಂದಿನ ತನಿಖೆ ಕೈಗೊಳ್ಳಲಾಗಿದೆ.




