Home Crime ಮಡಂತ್ಯಾರು: ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ : ಚಾಲಕ ಹಾಗೂ ಮಕ್ಕಳು ಅಪಾಯದಿಂದ ಪಾರು…!!

ಮಡಂತ್ಯಾರು: ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಪಲ್ಟಿ : ಚಾಲಕ ಹಾಗೂ ಮಕ್ಕಳು ಅಪಾಯದಿಂದ ಪಾರು…!!

ಮಡಂತ್ಯಾರು: ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಣಕಜೆ ಸಮೀಪ ಪಲ್ಟಿಯಾದ ಘಟನೆ ಆ.11 ರ ಸಂಜೆ ಸಂಭವಿಸಿದೆ.

ಮಡಂತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಆಟೋ ರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಗಿದೆ.

ಘಟನೆಯಲ್ಲಿ ಶಾಲಾ ಮಕ್ಕಳು ಹಾಗೂ ಆಟೋ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಪರಿಣಾಮ ಆಟೋ ರಿಕ್ಷಾದ ಮುಂಭಾಗ ನಜ್ಜುಗುಜ್ಜಾಗಿದ್ದು, ವಾಹನಕ್ಕೆ ಹಾನಿಯುಂಟಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.