Home Crime ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಕೃತ್ಯಕ್ಕೆ ಹಣ ವರ್ಗಾವಣೆ ಮೂಲಕ ಸಹಕರಿಸಿದ ಇಬ್ಬರು ಅರೆಸ್ಟ್…!!

ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಕೃತ್ಯಕ್ಕೆ ಹಣ ವರ್ಗಾವಣೆ ಮೂಲಕ ಸಹಕರಿಸಿದ ಇಬ್ಬರು ಅರೆಸ್ಟ್…!!

ಕಾಪು : ಉಡುಪಿ ಜಿಲ್ಲೆಯ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಡೇವಿಡ್  ಅವರನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪ್ರಕರಣದಲ್ಲಿ ಈಗಾಗಲೇ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ದಸ್ತಗಿರಿಗೊಳಿಸಿದ್ದು, ಹೆಚ್ಚಿನ ತನಿಖೆ ನಡೆಸಿದ ವೇಳೆ ಕೃತ್ಯಕ್ಕೆ ಹಣ ವರ್ಗಾವಣೆ ಮಾಡಲು ಸಹಾಯ ಮಾಡಿ ಆರೋಪಿಗಳಿಗೆ ಸಹಕರಿಸಿದ ಇಬ್ಬರ ಪಾತ್ರ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಚಿರಾಗ್ ಪೂಜಾರಿ (26), ತಂದೆ ಕಿಶೋರ್ ಪೂಜಾರಿ, ಎರ್ಮಾಳ್ ತೆಂಕ, ಕಾಪು ತಾಲೂಕು ಹಾಗೂ ಮೊಹಮ್ಮದ್ ಇರ್ಷಾದ್ (43), ತಂದೆ ದಿವಂಗತ ಹುಸೇನ್, ಎರ್ಮಾಳ್ ತೆಂಕ, ಕಾಪು ತಾಲೂಕು ಎಂಬವರನ್ನು ಆಗಸ್ಟ್ 12ರಂದು ಪೊಲೀಸರು ದಸ್ತಗಿರಿಗೊಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿ ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.