ಮಂಗಳೂರು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಇಮ್ರಾನ್ (36) ಎಂದು ತಿಳಿದು ಬಂದಿದೆ.
ಅರೋಪಿಯ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯ 10/2020ನೇ ಪ್ರಕರಣದಲ್ಲಿ ಕಲಂ 376, 506 ಐಪಿಸಿ ಹಾಗೂ ಮಾನ್ಯ ನ್ಯಾಯಾಲಯದ ಸಿ.ಸಿ. ನಂಬರ್ 2225/2021 ಪ್ರಕರಣದಲ್ಲಿ ವಾರೆಂಟ್ ಬಾಕಿ ಇತ್ತು ಪೊಲೀಸರು ತಿಳಿಸಿದ್ದಾರೆ.
ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಆ. 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.




