Home Crime ವಳಚ್ಚಿಲ್‌ನಲ್ಲಿ ಭೀಕರ ಅಪಘಾತ : ಢಿಕ್ಕಿ ಹೊಡೆದು ಪರಾರಿ : ಬೈಕ್ ಸವಾರ ಸ್ಥಳದಲ್ಲೇ ಸಾವು…!!

ವಳಚ್ಚಿಲ್‌ನಲ್ಲಿ ಭೀಕರ ಅಪಘಾತ : ಢಿಕ್ಕಿ ಹೊಡೆದು ಪರಾರಿ : ಬೈಕ್ ಸವಾರ ಸ್ಥಳದಲ್ಲೇ ಸಾವು…!!

ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಬಳಿಯ ಹೊಸ ಪೆಟ್ರೋಲ್ ಪಂಪ್ ಎದುರು ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ದೂರಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೂರಲ್ಪಾಡಿಯ ಹ್ಯಾರಿಸ್ ಎಂದು ಸ್ಥಳೀಯರು ಗುರುತಿಸಿದ್ದಾರೆ.

ರಾತ್ರಿ ಸುಮಾರು 10 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಬಗ್ಗೆ ಕಂಕನಾಡಿ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಜಾಗರೂಕ ಮತ್ತು ನಿರ್ಲಕ್ಷ್ಯದ ಚಾಲನೆ ಕುರಿತು ತನಿಖೆ ನಡೆಸುತ್ತಿದ್ದಾರೆ.