ಕಾರ್ಕಳ: ಮಂಗಳೂರಿನ ಪಶ್ಚಿಮ ವಲಯದ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ಳಿಯಪ್ಪ ಕೆ. ಯು. ಅವರನ್ನು ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಆಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಾರ್ಕಳದ ಎಎಸ್‌ಪಿಯಾಗಿದ್ದ ಡಾ. ಹರ್ಷಪ್ರಿಯಂವದ (ಐಪಿಎಸ್) ಅವರಿಗೆ ಬೆಂಗಳೂರಿನ ಸಿಐಡಿ ವಿಭಾಗದ ಎಸ್ಪಿಯಾಗಿ ಬಡ್ತಿ ನೀಡಿ ವರ್ಗಾಯಿಸಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ.
ಬೆಳ್ಳಿಯಪ್ಪ ಅವರು ಈ ಹಿಂದೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಹಾಗೂ ಕುಂದಾಪುರ ಉಪ ವಿಭಾಗದಲ್ಲಿ ಡಿವೈಎಸ್ಪಿ ಆಗಿ ಸೇವೆ ಸಲ್ಲಿಸಿದ್ದರು.



