ಪುತ್ತೂರು : ಕೆಯ್ಯುರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ, ಅಭಿಲಾಷ್(24) ಮೃತ ಯುವಕ ಎಂದು ತಿಳಿಯಲಾಗಿದೆ.
ಮಾಹಿತಿ ಪ್ರಕಾರ, ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸವಣೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟರು.
ಮೃತರು ತಂದೆ, ತಾಯಿ, ಅಣ್ಣನನ್ನು ಅಗಲಿದ್ದಾರೆ. ಘಟನೆ ಕುರಿತು ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.




