ಬಂಟ್ವಾಳ: ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಸದಾನಂದ ಅವರು ಜನವರಿ 7ರಂದು ತನ್ನ ಮೊಬೈಲ್‌ನ ಫೇಸ್ ಬುಕ್ ಖಾತೆಯನ್ನು ಗಮನಿಸಿದಾಗ ಬಿಲ್ಲವ ಸಂದೇಶ್ ಎಂಬ ಫೇಸ್ ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಶಾಸಕಿ ಶಾಸಕ ಭಾಗೀರಥಿ ಮುರುಳ್ಯ ಅವರ ಫೋಟೊವನ್ನು ಅವಹೇಳನ ರೀತಿಯಲ್ಲಿ ಬರಹಗಳನ್ನು ಹಾಕಿರುವುದು ಗಮನಿಸಿದ್ದಾರೆ. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸುಳ್ಳು ಅಪಪ್ರಚಾರವನ್ನು ಸಾಮಾಜಿಕ ಜಾಲತಾಣ ಫೇಸ್ ಬುಕ್‌ನಲ್ಲಿ ಮಾಡಲಾಗಿದೆ ಎಂದು ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.
ಸದಾನಂದ ಅವರ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರರ್ಜಿ ದಾಖಲಾಗಿರುತ್ತದೆ. ಈ ಬಗ್ಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.



