ಹಿರಿಯಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ಅನುಗ್ರಹ ಮತ್ತು ಪೂಜ್ಯರಾದ ಶ್ರೀ ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀಮತಿ ಹೇಮಾವತಿ ಅಮ್ಮನವರ ಶುಭಾಶೀರ್ವಾದದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್(ರಿ) ಉಡುಪಿ ತಾಲೂಕಿನ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ ಮಾಸಾಶನ ಫಲಾನುಭವಿಯಾದ ಹಿರಿಯಡಕ ಗ್ರಾಮದ ಬೊಮ್ಮಾರಬೆಟ್ಟು ನಿವಾಸಿ ಗೋಪಾಲಕೃಷ್ಣ ದೇವಾಡಿಗ ಇವರಿಗೆ ವಾತ್ಸಲ್ಯ ಮನೆ ಮಂಜೂರಾಗಿರುತ್ತದೆ. ಆ ಪ್ರಯುಕ್ತ ಮನೆ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,
ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಸತ್ಯಾನಂದ ನಾಯಕ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯಡ್ಕ ವಲಯದ ಅಧ್ಯಕ್ಷರಾದ ಶ್ರೀ ಗಣೇಶ್ ನಾಯ್ಕ್, ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಮತಿ ನಳಿನಾ ದೇವಿ, ಶ್ರೀ ಉಮೇಶ್ ಶೆಟ್ಟಿ, ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ, ಸೇವಾಪ್ರತಿನಿಧಿ ಯಶೋಧ, ಶೌರ್ಯ ಘಟಕದ ಸದಸ್ಯರುಗಳು, ಪಂಚನಬೆಟ್ಟು ಒಕ್ಕೂಟದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




