ಉಡುಪಿ : ನಗರದ ಇಂದ್ರಾಳಿ ರೈಲ್ವೆ ಗೊಡೌನ್ ಬಳಿ ಬೆಂಕಿ ಅವಘಡ ಸಂಭವಿಸಿದೆ. ಸಂಜೆ ವೇಳೆಗೆ ಒಣ ಹುಲ್ಲಿಗೆ ಬೆಂಕಿ ತಗುಲಿ ಸುತ್ತ ಇಡೀ ವ್ಯಾಪಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ರೈಲ್ವೇ ಸಿಬ್ಬಂದಿಗಳು ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.



