ಮೂಡುಬೆಳ್ಳೆ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕಲ್ಯಾಣಪುರದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಮ್ಯಾ ಆರ್ ಮೊಗವಿರ ಅವರು ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.



