ವಿಟ್ಲ: ಮೇಯಲು ಬಿಟ್ಟಿದ್ದ ದನಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲದ ಝುಲ್ಫಾನ್ ಮಾಲಿಕ್ ಉಳ್ಳಾಲ್ (30) ಎಂದು ಗುರುತಿಸಲಾಗಿದೆ.
2025ರ ನ.18ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳದ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬವರ 4 ದನಗಳು ಕಳ್ಳತನವಾಗಿದ್ದರ ಬಗ್ಗೆ ಗಣೇಶ ರೈ ಎಂಬವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ತನಿಖೆ ನಡೆಸಿದ ಪೊಲೀಸರು ಜ.8ರಂದು ಆರೋಪಿ ಝುಲ್ಫಾನ್ ಮಾಲಿಕ್ ಉಳ್ಳಾಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.



