Home Crime ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ನಿಂತಿದ್ದ ಕಾರಿಗೆ ಹಿಂದಿನಿಂದ ಢಿಕ್ಕಿಯಾದ...

ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ನಿಂತಿದ್ದ ಕಾರಿಗೆ ಹಿಂದಿನಿಂದ ಢಿಕ್ಕಿಯಾದ ಲಾರಿ : ಬಾಲಕ ವೃತದಾರಿ ಸಾವು…!!

ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸ್ ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಜ.9ರ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.

ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಷ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ.

ಇನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್, ಗೋಪಾಲ ಪೂಜಾರಿ, ಲಕ್ಷ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಇನ್ನೋವಾ ಕಾರಿನಲ್ಲಿ ಒಟ್ಟು 7 ಮಂದಿ ಕುರಿಯಾಳದಿಂದ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳಿದ್ದರು.

ಸಿದ್ದಕಟ್ಟೆಯ ಶಾಲೆಯ 9 ನೇ ತರಗತಿಯ ಬಾಲಕ ಲಕ್ಷ್ಮೀಶ, ಆತನ ತಂದೆ ಅಶೋಕ್ ಪೂಜಾರಿ ಜೊತೆ ಶಬರಿಮಲೆಗೆ ಜ.7 ರಂದು ಇನ್ನೋವಾ ಕಾರಿನಲ್ಲಿ ತೆರಳಿದ್ದರು. ಒಟ್ಟು 9 ಮಂದಿ ಕಾರಿನಲ್ಲಿ ತೆರಳಿದ್ದು, ದೇವರ ದರ್ಶನ ಮುಗಿಸಿ ಜ.9 ರಂದು ವಾಪಸ್ ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಇವರ ಕಾರು ಕೆಟ್ಟುಹೋಗಿತ್ತು.

ಈ ಕಾರಣಕ್ಕಾಗಿ ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತುಕೊಂಡಿದ್ದು, ಉಳಿದಂತೆ ಚಾಲಕ ಸೇರಿ 7 ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ದರು. ಸುಮಾರು 2 ಗಂಟೆ ವೇಳೆಗೆ ಯಮ ಸ್ವರೂಪಿ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.