Home Latest ನಾಗರಪಂಚಮಿ : ನಾಳೆ ಆ.17 ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ…!!

ನಾಗರಪಂಚಮಿ : ನಾಳೆ ಆ.17 ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ…!!

ಉಡುಪಿ: ನಾಗರಪಂಚಮಿ ಹಬ್ಬದ ಪ್ರಯುಕ್ತ ಉಡುಪಿ ಜಿಲ್ಲೆಯಲ್ಲಿ ನಾಳೆ ಆಗಸ್ಟ್ 17 ಸೋಮವಾರ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಜಿಲ್ಲಾಡಳಿತ ಈ ಕುರಿತು ಆದೇಶ ಹೊರಡಿಸಿದೆ. ರಜೆಯ ಕಾರಣದಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಮತ್ತು ಬ್ಯಾಂಕ್‌ಗಳಿಗೆ ರಜೆ ಇರಲಿದೆ.

ನಾಗರಪಂಚಮಿಯಂದು ಉಡುಪಿ ಜಿಲ್ಲೆಯಾದ್ಯಂತ ಭಕ್ತರು ನಾಗ ದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆ ಸಲ್ಲಿಸುತ್ತಾರೆ. ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಈ ರಜೆ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.