Home Crime ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ…!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ…!!

ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ….!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ.

ಪ್ರಯಾಣಿಕರನ್ನು ಕೂರಿಸಿಕೊಂಡು ತೆರಳುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಘಟನೆಯಲ್ಲಿ ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.