ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಮುಂದೆ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70) ಎಂದು ಗುರುತಿಸಲಾಗಿದೆ.
ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




