ಉಡುಪಿ: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಕಚೇರಿ ನಿರ್ವಾಹಕ ಹಾಗೂ ಸಾಯಿ ಕ್ಯಾಟರರ್ಸ್ ಮಾಲೀಕ ಸಂತೋಷ್ ಶೆಟ್ಟಿ ಗುರ್ಮೆ ಕಳತ್ತೂರು ಸಂತೋಷ್ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.
ಸಂತೋಷ್ ಶೆಟ್ಟಿ ಅವರು ಕಳೆದ 32 ವರ್ಷಗಳಿಂದ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಅವರ ನಿಧನಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಸಿಬ್ಬಂದಿ ವರ್ಗ ಸಂತಾಪ ವ್ಯಕ್ತಪಡಿಸಿದೆ.
ಸಂತೋಷ್ ಶೆಟ್ಟಿ ಅವರು ಪತ್ನಿ, ಪುತ್ರ, ಕುಟುಂಬಸ್ಥರು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.




