Home Crime ಮುರ್ಡೇಶ್ವರ ಬೀಚ್‌ನಲ್ಲಿ ಗಾಂಜಾ ಸೇವನೆ : ಹುಬ್ಬಳ್ಳಿ ಮೂಲದ ವ್ಯಕ್ತಿ ಅರೆಸ್ಟ್…!!

ಮುರ್ಡೇಶ್ವರ ಬೀಚ್‌ನಲ್ಲಿ ಗಾಂಜಾ ಸೇವನೆ : ಹುಬ್ಬಳ್ಳಿ ಮೂಲದ ವ್ಯಕ್ತಿ ಅರೆಸ್ಟ್…!!

ಭಟ್ಕಳ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮ್ಹಾತೋಬಾರ ದೇವಸ್ಥಾನದ ಸಮೀಪದ ಬೀಚ್ ಪ್ರದೇಶದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದಾನೆ ಎಂಬ ಅನುಮಾನದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಅಮರಗೋಳ ನಿವಾಸಿ, ಕೀಯಾ ಕಂಪನಿಯ ಉದ್ಯೋಗಿಯಾಗಿರುವ ಸಿದ್ದಪ್ಪ ಜವಾಹರಲಾಲ್ ನೇಹರು ಬಳ್ಳುರ (33) ಎಂಬಾತನ ವಿರುದ್ಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆಗಸ್ಟ್ 16ರಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಮ್ಹಾತೋಬಾರ ದೇವಸ್ಥಾನದ ಹತ್ತಿರದ ಬೀಚ್‌ನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇಲೆ ಪಿಎಸ್‌ಐ ಹಣಮಂತ ಬಿರಾದಾರ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿತು.

ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು (ಪಾಸಿಟಿವ್ ವರದಿ), ಈ ಹಿನ್ನೆಲೆಯಲ್ಲಿ ಸರ್ಕಾರದ ಪರವಾಗಿ ಪಿಎಸ್‌ಐ ಹಣಮಂತ ಬಿರಾದಾರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆಯನ್ನು ಮುರ್ಡೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಸುಬ್ಬಾ ಜೆ. ದೇವಾಡಿಗ ಅವರು ಕೈಗೊಂಡಿದ್ದಾರೆ.