ಆನೇಕಲ್: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ ಓರಲ್ ಮೆಡಿಸಿನ್ ಮತ್ತು ರೆಡಿಯಾಲಜಿ ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಜ.9ರಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಮೃತಳ ತಾಯಿ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ. ಯಶಸ್ವಿನಿ ಸಾವಿಗೆ ಕಾಲೇಜು ಉಪನ್ಯಾಸಕರ ನೀಡುತ್ತಿದ್ದ ಕಾರಣ, ಅಲ್ಲದೇ ಕ್ಲಾಸಿನಲ್ಲಿ ಯಶಸ್ವಿನಿ ಬಣ್ಣದ ಬಗ್ಗೆ ಮಾತನಾಡಿ ಟೀಕಿಸಿದ್ದಾರೆ. ಸೆಮಿನಾರ್ ಅಟೆಂಡ್ ಮಾಡಲು ಸಹ ಅವಕಾಶ ನೀಡಿಲ್ಲ, ಕಣ್ಣು ನೋವು ಎಂದಾಗ ಅವಮಾನಿಸಿ ಕಿರುಕುಳ ನೀಡಿದ್ದಾರೆ. ಹೀಗಾಗಿ ಉಪನ್ಯಾಸಕರ ವಿರುದ್ಧ ಆದಷ್ಟು ಬೇಗ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದ್ದಾರೆ.



