Home Crime ಗಂಗೊಳ್ಳಿ: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!!

ಗಂಗೊಳ್ಳಿ: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!!

ಗಂಗೊಳ್ಳಿ: ಉಡುಪಿ ಜಿಲ್ಲೆಯ ಮರವಂತೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಅರಬ್ಬಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಮರವಂತೆ ಗ್ರಾಮದ ನಾಗರಾಜ ಖಾರ್ವಿ (40) ಎಂದು ಗುರುತಿಸಲಾಗಿದೆ.

ಎಂದಿನಂತೆ ಆ.19ರಂದು ಬೆಳಗ್ಗೆ 5 ಗಂಟೆಗೆ ಆನಂದ ಖಾರ್ವಿ ಅವರ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ, ಬಂದರಿನಿಂದ ಸುಮಾರು 200 ಮೀಟರ್ ದೂರದಲ್ಲಿ ಜೋರಾಗಿ ಗಾಳಿ ಬೀಸಿದ ಪರಿಣಾಮ ದೋಣಿ ಅಲುಗಾಡಿದೆ. ಈ ವೇಳೆ ನಾಗರಾಜ ಖಾರ್ವಿ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾರೆ.

ದೋಣಿಯಲ್ಲಿದ್ದವರು ಹಾಗೂ ಅವರ ಸಹೋದರ ಶ್ರೀನಿವಾಸ ಖಾರ್ವಿ ಅವರು ನಾಗರಾಜರನ್ನು ನೀರಿನಿಂದ ಮೇಲಕ್ಕೆತ್ತಿ ತಕ್ಷಣ ಚಿಕಿತ್ಸೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಪರೀಕ್ಷಿಸಿ ಬೆಳಗ್ಗೆ 7:15ಕ್ಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.