Home Crime ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು…!!

ಉಪ್ಪಿನಂಗಡಿ : ಪಿಕಪ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ್ಯು…!!

ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿ ವಾಹನದಲ್ಲಿದ್ದ ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಪಿಕಪ್‍ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.