ಉಡುಪಿ : ದಿನಾಂಕ 21/08/2026ರಂದು ಕುಂದಾಪುರದಲ್ಲಿ ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರಿಗೆ ಆಪಾದಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಎಂಬುವರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರು ಒಳರೋಗಿಗಳಿಂದ ಚಿಕಿತ್ಸೆಯ ಸಂದರ್ಭದಲ್ಲಿ ಹಣ ಪಡೆಯುತ್ತಿರುವ ಬಗ್ಗೆ ಶ್ರೀಕಾಂತ್ ಅವರು ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದರು. ಈ ವಿಚಾರಕ್ಕೆ ದ್ವೇಷಗೊಂಡು ಆಪಾದಿತರು ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.




