ಉಡುಪಿ: ನಗರ ಪೊಲೀಸ್ ಠಾಣೆಯ ಅ.ಕ್ರ. 326/2009, ಕಲಂ 4(1)(2)(ಸಿ), 5, 6 ITP Act ಪ್ರಕರಣದಲ್ಲಿ ಮಾನ್ಯ ಪಿಸಿಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಸಿಸಿ ನಂ. 2766/2024ರ ವಾರಂಟ್‌ದಾರಳಾಗಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾಣೀಶ್ರೀ @ ರೇಣುಕಾ (42), ಗಂಡ ನಾಗರಾಜ್, ದಾವಣಗೆರೆ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ನಿರೀಕ್ಷಕರ ಆದೇಶ ಹಾಗೂ ಮಾರ್ಗದರ್ಶನದಂತೆ HC 40, PC 157 ಹಾಗೂ WPC 368 ನೇಯವರು ದಾವಣಗೆರೆಯ ಕೆ.ಟಿ.ಜೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ದಿನಾಂಕ 20/08/2026ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ನಂತರ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಳಿಕ ಆರೋಪಿಯನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.




