ಹಿರಿಯಡ್ಕ: ಅಂಜಾರು ಗ್ರಾಮದ ಕಾಂತಾರಗುಂಡಿ ದರ್ಖಾಸ್ ಮನೆಯಲ್ಲಿ ವಾಸವಾಗಿದ್ದ ನಿವೃತ್ತ ಬ್ಯಾಂಕ್ ಉದ್ಯೋಗಿ ನರಸಿಂಹ ನಾಯಕ್ (62) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆಗಸ್ಟ್ 20ರ ರಾತ್ರಿ 10 ಗಂಟೆಯಿಂದ ಆಗಸ್ಟ್ 21ರ ಬೆಳಗ್ಗೆ 6.30ರ ನಡುವಿನ ಅವಧಿಯಲ್ಲಿ ಮನೆಯ ತಾರಸಿಯ ಮೇಲಿರುವ ಕಬ್ಬಿಣದ ಜಂತಿಗೆ ನೈಲಾನ್ ಹಗ್ಗ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ನರಸಿಂಹ ನಾಯಕ್ ಅವರು ಬ್ಯಾಂಕ್ ಉದ್ಯೋಗಿಯಾಗಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ಬಳಿಕ ಪತ್ನಿ ನಮಿತಾ ಹಾಗೂ ಪುತ್ರ ನವೀನ್ ಅವರು ಕಿರಿಕಿರಿ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಕುರಿತು ಮೃತರ ದೊಡ್ಡಪ್ಪನ ಮಗ ಸುರೇಶ್ ನಾಯಕ್ ನೀಡಿದ ದೂರಿನ ಆಧಾರದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




