ಉಡುಪಿ: ಶೀರೂರು ಪರ್ಯಾಯದ ಹಿನ್ನೆಲೆಯಲ್ಲಿ ಜ.17ರ ಬೆಳಿಗ್ಗೆ 10ಗಂಟೆಯಿಂದ ಜ.18ರ ಸಂಜೆ 6 ಗಂಟೆಯವರೆಗೆ ನಗರಸಭಾ ವ್ಯಾಪ್ತಿ ಹಾಗೂ ಕೆಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶ ಹೊರಡಿಸಿದ್ದಾರೆ.
ಉಡುಪಿ ನಗರ ಸಭಾ ವ್ಯಾಪ್ತಿ ಹಾಗೂ ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಹಿರೇಬೆಟ್ಟು, ಕುತ್ಪಾಡಿ ಕಡೆಕಾರು, ಕಿದಿಯೂರು, ಮೂಡುತೋನ್ನೆ ಹಾಗೂ ಪಡುತೋನ್ಸೆ ಗ್ರಾಮ ವ್ಯಾಪ್ತಿಯಲ್ಲಿ (10-15 ಕಿ.ಮೀ) ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.




