ಉಡುಪಿ : ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ದಿನನಿತ್ಯದ ತ್ಯಾಜ್ಯ ಹೊರತುಪಡಿಸಿ ಸಾರ್ವಜನಿಕ ಸಭೆ, ಸಮಾರಂಭ, ಗೃಹ ಪ್ರವೇಶ, ಮದುವೆ, ಕ್ರೀಡಾಕೂಟ ಹಾಗೂ ಇನ್ನಿತರ ವಿಶೇಷ ಕಾರ್ಯಕ್ರಮಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿಗೆ ಮುಂಚಿತವಾಗಿ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸುವಂತೆ ಹಾಗೂ ಕಾರ್ಯಕ್ರಮಗಳಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.



