ಕುಂದಾಪುರ: ಇಂದು ಬೆಳ್ಳಂಬೆಳಿಗ್ಗೆಯೇ ಕುಂದಾಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಅನಿರೀಕ್ಷಿತವಾಗಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗೆ ಆಗಮಿಸುತ್ತಿದ್ದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಕಾಲ ಕಕ್ಕಾಬಿಕ್ಕಿಯಾಗಿದ್ದಾರೆ ಎನ್ನಲಾಗಿದೆ.
ಬಳಿಕ ಅಧಿಕಾರಿಗಳ ತಂಡ ಪುರಸಭೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಪ್ರಮುಖ ಕಡತಗಳು ಮತ್ತು ದಾಖಲೆಗಳ ಪರಿಶೀಲನೆ ನಡೆಸಿದೆ. ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಲಾಗಿದೆ ಎಂದು ತಿಳಿದುಬಂದಿದೆ.
ಪರಿಶೀಲನೆ ಮುಂದುವರಿದಿದ್ದು, ಲೋಕಾಯುಕ್ತ ಅಧಿಕಾರಿಗಳ ಈ ದಿಢೀರ್ ಕ್ರಮದಿಂದ ಕುಂದಾಪುರ ಪುರಸಭೆಯಲ್ಲಿ ಸಂಚಲನ ಮೂಡಿದೆ.







