Home Crime ಬ್ರಹ್ಮಾವರ: ತಂದೆ–ತಾಯಿ ಹತ್ಯೆ ಪ್ರಕರಣ : ಆರೋಪಿ ಮಗನ ಅರೆಸ್ಟ್…!!

ಬ್ರಹ್ಮಾವರ: ತಂದೆ–ತಾಯಿ ಹತ್ಯೆ ಪ್ರಕರಣ : ಆರೋಪಿ ಮಗನ ಅರೆಸ್ಟ್…!!

ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ ಪುತ್ರನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಗಾಂಧಿನಗರ ಬೈಕಾಡಿ ಗ್ರಾಮದ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50) ಕೊಲೆಯಾದವರು.

ಪುತ್ರ ಶಾಹಿದ್ ಅಲಿ (31) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ತಂದೆ–ತಾಯಿ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರೆಂಬ ಕಾರಣಕ್ಕೆ ಆ.23ರಂದು ರಾತ್ರಿ 7ರ ಸುಮಾರಿಗೆ ಅವರನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವುದಾಗಿ ಆರೋಪಿ 112ಕ್ಕೆ ಕರೆ ಮಾಡಿ ತಿಳಿಸಿದ್ದಾನೆ. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದಾಗ ಇಬ್ಬರೂ ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.