ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನಂದಾವರ ಬಳಿಯ ಸಜಿಪ ಮುನ್ನೂರು ನಿವಾಸಿ ಮಹಮ್ಮದ್ ಇಮ್ಮಿಯಾಝ್ (40) ಬಂಧಿತ ಆರೋಪಿ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ, ರಾಣಿಪುರ ಮೈದಾನದ ಬಳಿ ಆರೋಪಿ ಮೊಹಮ್ಮದ್ ಇಯ್ತಿಯಾಝ್ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ.
ಈ ಬಗ್ಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಸುಮಾರು 65,000 ರೂ. ಬೆಲೆಬಾಳುವ ನಿಷೇಧಿತ ಮಾದಕದ್ರವ್ಯ 13ಗ್ರಾಂ ತೂಕದ ಎಂಡಿಎಂಎ ಮತ್ತು 2000ರೂ., 1 ಮೊಬೈಲ್ ಫೋನ್ ಹಾಗೂ ತೂಕಮಾಪನ, ಇತರೆ ವಸ್ತುಗಳ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ – 1985 ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.



