ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಮೃತ ಯುವಕನು ಮೀನು ಕಾರ್ಮಿಕ ಅಭಿಷೇಕ್ ಎಂದು ತಿಳಿಯಲಾಗಿದೆ.
ಬೋಟ್‌ನಲ್ಲಿ ಕಾರ್ಮಿಕರೊಂದಿಗೆ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೀನುಗಾರಿಕೆ ದೃಷ್ಟಿಯಿಂದ ಮಲ್ಪೆ ಬಂದರಿಗೆ ಯುವಕನ ಹೆಸರು ಪೊಲೀಸರು ಬಹಿರಂಗಪಡಿಸಿಲ್ಲ. ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಗೆ ನಿಖರ ಕಾರಣ ಹಾಗೂ ಹೆಚ್ಚಿನ ಸಂಪೂರ್ಣ ವಿವರಗಳನ್ನು ಪೊಲೀಸರು ತನಿಖೆ ನಡೆಸುತಿದ್ದಾರೆ.




