Home Crime ಉಪ್ಪಿನಂಗಡಿ: 3 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್ ..!!

ಉಪ್ಪಿನಂಗಡಿ: 3 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್ ..!!

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಚಿನ್ನಾಭರಣ ಅಂಗಡಿಯಿಂದ 2019 ರಲ್ಲಿ ಚಿನ್ನಾಭರಣವನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ 3 ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ರಾಜಸ್ಥಾನದಿಂದ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ರಾಜಸ್ಥಾನದ ಬೊಂದಿ ಜಿಲ್ಲೆಯ ಡೊಂಗ್ರಿ ಗ್ರಾಮದ ಗುರುದ್ವಾರ ಬಳಿಯ ನಿವಾಸಿ ಜಮೀಲ್ ಚಾಚಾ (62) ಎಂದು ತಿಳಿದು ಬಂದಿದೆ.

ಈತ ಉಪ್ಪಿನಂಗಡಿಯ ಚಿನ್ನಾಭರಣ ಮಳಿಗೆಯಿಂದ ಆಭರಣ ಕಳವು ಮಾಡಿ ಪರಾರಿಯಾದ್ದು, ಈತನ ಬಗ್ಗೆ ಮಾಹಿತಿ ಕಲೆ ಹಾಕಿದ ಅಂದಿನ ಎಸ್ಸೈ ನಂದ ಕುಮಾರ್ ಮತ್ತವರ ತಂಡ ರಾಜಸ್ಥಾನದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.

ಬಂಧಿತ ಆರೋಪಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಕಳೆದ ಮೂರು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.

ನ್ಯಾಯಾಲಯವು ಈತನ ವಿರುದ್ಧ ವಾರೆಂಟ್ ಹೊರಡಿಸಲಾಗಿದ್ದು, ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ರಾಜಸ್ಥಾನದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.