Home Latest ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು ..!!

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು ..!!

ವಿಟ್ಲ : ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ ಕೋಟಿಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಲಿತಿನ್ ಅವರು ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ನೀರಿನಿಂದ ಅವರನ್ನು ಮೇಲಕ್ಕೆತ್ತಿ ರಕ್ಷಿಸಲು ಮುಂದಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಮೃತ ಲಿತಿನ್ ಅವರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.