ಶಂಕರಪುರ: ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಶಂಕರಪುರದ ವಿಶ್ವಾಸದ ಮನೆಯಲ್ಲಿ ಸಂಭ್ರಮ ಮತ್ತು ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರೈಮ್ ಟಿವಿಯ ನಿರ್ದೇಶಕರಾದ ರೂಪೇಶ್ ಕಲ್ಮಾಡಿ ಅವರ ಹುಟ್ಟುಹಬ್ಬವನ್ನೂ ವಿಶೇಷವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರೂಪೇಶ್ ಕಲ್ಮಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಅವರ ಧರ್ಮಪತ್ನಿ ಸುಪ್ರಿತಾ ರೂಪೇಶ್ ಕಲ್ಮಾಡಿ ಅವರು ಕೂಡ ಉಪಸ್ಥಿತರಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ಈ ಸಂದರ್ಭದಲ್ಲಿ ಸ್ಮರಿಸಿ ಗುಣಗಾನ ಮಾಡಲಾಯಿತು.
ವಿಶ್ವಾಸದ ಮನೆಯ ಎಲ್ಲಾ ಕಾರ್ಯಕರ್ತರು ಹಾಗೂ ಸದಸ್ಯರಿಗೆ ಸಿಹಿತಿಂಡಿ ವಿತರಿಸುವ ಮೂಲಕ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಬಾಬು ಮ್ಯಾಥ್ಯೂ, ಪ್ರೇಮ ಮಾರ್ಗರೇಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪತ್ರಕರ್ತ ಪ್ರಕಾಶ್ ಸುವರ್ಣ ಕಟಪಾಡಿ ಅವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.












