ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಮದನಿನಗರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ನೌಫಲ್ (32) ಎಂದು ತಿಳಿದು ಬಂದಿದೆ.
ಈತ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದಂತೆ ವರ್ತಿಸುತ್ತಿದ್ದ. ಈತನನ್ನು ಅನುಮಾನದ ದೃಷ್ಟಿಯಿಂದ ಉಳ್ಳಾಲ ಠಾಣಾ ಸಿ ಹೆಚ್ ಸಿ ಶಿವನಾಯಕ್ ಮತ್ತು ಆನಂದ ಬಾಡಗಿ ರವರು ವಶಕ್ಕೆ ಪಡೆದು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ
ಈ ಕುರಿತು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.




