ಕಡಬ : ಅಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ೩ ಸಾವಿರ ರೂ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಪೊಲೀಸ್ ಠಾಣಾ ಅ. ಕ್ರ : 06/2020, ಕಲಂ : 354A, 509, 504, 506, 448, 307, 326A IPC ಆಸಿಡ್ ದಾಳಿ ಪ್ರಕರಣದಲ್ಲಿ ಕಡಬ ಕೊಡಿಂಬಳ ನಿವಾಸಿ ಜಯಾನಂದ. ಕೆ (60) ಎಂಬಾತ ಆರೋಪಿ ಆಗಿದ್ದ.
ತನಿಖೆ ನಡೆಸಿದ, ಪ್ರಕರಣದ ಆಗಿನ ತನಿಖಾಧಿಕಾರಿಗಳು ಹಾಗೂ ಪುತ್ತೂರು ಮಹಿಳಾ ಠಾಣಾ ಪೊಲೀಸ್ ನಿರೀಕ್ಷಕರಾಗಿದ್ದ ಕುಸುಮಧರ ಅವರು ಸೂಕ್ತ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪುತ್ತೂರಿನಲ್ಲಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶರಾದ ಶ್ರೀ ಸದಾನಂದ ನಾಗಪ್ಪ ನಾಯ್ಕ್ ರವರು ರವರು ಆರೋಪಿಗೆ ಕಲಂ 326A IPC ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3,00,000 ದಂಡ (ದಂಡ ಪಾವತಿಸಲು ವಿಫಲವಾದಲ್ಲಿ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ). ಕಲಂ 504 IPC ಅಡಿಯಲ್ಲಿ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ ರೂ.5,000- ದಂಡ (ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ) ವಿಧಿಸಿ ಆದೇಶಿಸಲಾಗಿದೆ.
ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯವರ್, ಪ್ರಕಾಶ್ ಚಂದ್ರ ಶೆಟ್ಟಿ, ಜಯಂತಿ. ಕೆ ರವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.




