Home Crime ಉಡುಪಿ : ಯುವಕ ನಾಪತ್ತೆ…!!

ಉಡುಪಿ : ಯುವಕ ನಾಪತ್ತೆ…!!

ಉಡುಪಿ: ಅಲೆವೂರಿನ ಇಂದಿರಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪವನ್ ಕುಮಾರ್ (24) ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಪವನ್ ಕುಮಾರ್ ಅವರು ಆಗಸ್ಟ್ 8ರಂದು ರಾತ್ರಿ 9 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದು, ಬಳಿಕ ಮನೆಗೆ ವಾಪಸ್ ಬಂದಿಲ್ಲ. ಸಂಬಂಧಿಕರ ಮನೆಗಳಲ್ಲಿಯೂ ಪತ್ತೆಯಾಗಿಲ್ಲ ಎಂದು ಅವರ ಪತ್ನಿ ಗಗನ (21) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 115/2026, ‘ಮ್ಯಾನ್ ಮಿಸ್ಸಿಂಗ್’ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.