Home Crime ಕಾಸರಗೋಡು : ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ…!!

ಕಾಸರಗೋಡು : ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ…!!

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ.

ಮೃತರನ್ನು ದ.ಕ. ಜಿಲ್ಲೆಯ ಆಸಿಫ್ ಮುಹಮ್ಮದ್(41) ಮತ್ತು ಮುಹಮ್ಮದ್ ಶಫೀಕ್(23) ಎಂದು ಗುರುತಿಸಲಾಗಿದೆ.

ವ್ಯವಹಾರಕ್ಕೆ ಸಂಬಂಧಿಸಿ ಕಾರಿನಲ್ಲಿ ವಯನಾಡಿಗೆ ತೆರಳಿದ್ದ ಈ ಐವರು ಗೆಳೆಯರು, ಸೋಮವಾರ ರಾತ್ರಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಇವರು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು ಕಾರು ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿಗೆ ತಲುಪಿದಾಗ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.