ಕಾಪು : ಉಡುಪಿ ಜಿಲ್ಲೆಯ ಕಾಪು ಸಮೀಪ ನಿವಾಸಿ ವಯೋವೃದ್ಧರೊಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ
ಮೃತರು ಸಂಜೀವ ಕುಂದರ್ 67 ವರ್ಷ ಎಂದು ತಿಳಿಯಲಾಗಿದೆ.
ದಿನಾಂಕ 26/08/2026 ರಂದು ಮಧ್ಯಾಹ್ನ 2:30ಕ್ಕೆ ಮನೆಯಲ್ಲಿ ಊಟ ಮಾಡಿದ ಬಳಿಕ ತನ್ನ ಕೊಠಡಿಗೆ ಹೋಗಿ ಮಲಗಿದ್ದರು. ಸಂಜೆ 15:30ಕ್ಕೆ ಅವರ ಮಗಳಾದ ಅನುರಾಧ ಅವರು ಕೊಠಡಿಗೆ ಹೋಗಿ ನೋಡಿದಾಗ, ಪ್ಲಾಸ್ಟಿಕ್ ಚೇರ್ ಸಹಾಯದಿಂದ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಹಗ್ಗವನ್ನು ಕುತ್ತಿಗೆಗೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 25/2026 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.
–




