Home Crime ಕಾಪು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

ಕಾಪು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

ಕಾಪು: ಕಾಪುವಿನ ವ್ಯಕ್ತಿಯೊಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದವರು ಸಂಜೀವ ಕುಂದರ್ (67) ಎಂದು ತಿಳಿದು ಬಂದಿದೆ.

ಬುಧವಾರ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ ಬಳಿಕ ತನ್ನ ಕೊಠಡಿಗೆ ಹೋಗಿ ಮಲಗಿದ್ದರು. ಸಂಜೆ ಅವರ ಮಗಳು ಅನುರಾಧ ಅವರು ಕೊಠಡಿಗೆ ಹೋಗಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.